ಕಾಸರಗೋಡು: ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ನೆಹರೂ ಯುವ ಕೇಂದ್ರ ರಾಜ್ಯದಲ್ಲಿ 1500 ಹೆಲ್ಪ್ ಡೆಸ್ಕ್ ಆರಂಭಿಸಲಿದೆ. ಕೋವಿಡ್ ಪ್ರತಿರೋಧ ಚಟುವಟಿಕೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನಿಡುವ ನಿಟ್ಟಿನಲ್ಲಿ, ವಾಕ್ಸಿನೇಷನ್ ಸ್ವೀಕಾರ ನಿಟ್ಟಿನಲ್ಲಿ ಆನ್ ಲೈನ್ ನೋಂದಣಿ ನಡೆಸುವ ನಿಟ್ಟಿನಲ್ಲಿ ಸಹಾಯ ಒದಗಿಸುವ ನಿಟ್ಟಿನಲ್ಲಿ ಈ ಹೆಲ್ಪ್ ಡೆಸ್ಕ್ ಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ನಿರ್ದೇಶಕ ಕೆ.ಕುಂಞಹಮ್ಮದ್ ತಿಳಿಸಿದರು. ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ವಿವಿಧ ಜಿಲ್ಲೆಗಳಲ್ಲಿ ಇವು ಆರಂಭಗೊಳ್ಳಲಿವೆ ಎಂದು ಮಾಹಿತಿ ನೀಡಿರುವರು.