ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡನೇ ಅಲೆ ಬಂದ ನಂತರ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಕಠಿಣವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1 ಲಕ್ಷದ 68 ಸಾವಿರದ 912 ಸೋಂಕಿತರು ಪತ್ತೆಯಾಗಿದ್ದಾರೆ.
ನಿನ್ನೆ ಒಂದೇ ದಿನ 904 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಇದುವರೆಗೆ ಮೃತಪಟ್ಟವರ ಸಂಖ್ಯೆ 1,70,179ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 12 ಲಕ್ಷದ 01 ಸಾವಿರದ 009ಕ್ಕೆ ಏರಿಕೆಯಾಗಿದೆ.
ಒಂದೇ ದಿನ 1,68,912 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,35,27,717ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 75 ಸಾವಿರದ 086 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1 ಕೋಟಿಯ 21 ಲಕ್ಷದ 56 ಸಾವಿರದ 529 ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ನಿನ್ನೆ ಒಂದೇ ದಿನ 11 ಲಕ್ಷದ 80 ಸಾವಿರದ 136 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25 ಲಕ್ಷದ 78 ಸಾವಿರದ 06 ಸಾವಿರದ 986 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.