HEALTH TIPS

ಕೋವಿಡ್-19: ದೇಶದಲ್ಲಿಂದು 1,26,789 ಕೇಸ್ ಪತ್ತೆ, 1.29 ಕೋಟಿಗೆ ಸೋಂಕಿತರ ಸಂಖ್ಯೆ

      ನವದೆಹಲಿ: ಕೊರೋನಾ 2ನೇ ಅಲೆಯ ಪ್ರತಾಪ ಮುಂದುವರೆದಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 1.26 ಲಕ್ಷ ಜನರನ್ನು ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಯಾವುದೇ ಒಂದು ದಿನದಲ್ಲಿ ದಾಖಲಾದ ಗರಿಷಅಠ ಪ್ರಮಾಣವಾಗಿದೆ. 

      ಕಳೆದ 24 ಗಂಟೆಗಳಲ್ಲಿ 685 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,66,862ಕ್ಕೆ ಏರಿಕೆಯಾಗಿದೆ. 

      ಹೊಸ ಕೇಸ್ ಗಳು ಏರುಗತಿಯಲ್ಲಿರುವ ಕಾರಣ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,10,319ಕ್ಕೆ ತಲುಪಿದೆ. 

     ಒಂದೇ ದಿನ 1,26,789 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,29,28,574ಕ್ಕೆ ಏರಿಕೆಯಾಗಿದೆ. 

      ಈ ನಡುವೆ ಕಳೆದ 24 ಗಂಟೆಗಳಲ್ಲಿ 59,258 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,18,51,393ಕ್ಕೆ ತಲುಪಿದೆ. 

      ಭಾರತದಲ್ಲಿ ಒಂದೇ ದಿನ 12,37,781 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,26,77,379 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

      ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

      ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 9,01,98,673 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries