ಮುಂಬೈ: ಮುಂಬೈ ನಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಬೃಹತ್ ಮುಂಬೈ ಮಹಾನಗರ ಪಾಲಿಕೆ ಕೆಲವು ನಿರ್ಬಂಧಗಳನ್ನು ವಿಧಿಸುವುದಕ್ಕೆ ಮುಂದಾಗಿದೆ.
ಸಿನಿಮಾ ಥಿಯೇಟರ್, ಧಾರ್ಮಿಕ ಪ್ರದೇಶಗಳು, ಮಾಲ್ ಗಳನ್ನು ಮುಂದಿನ ಕೆಲವು ದಿನಗಳ ಕಾಲ ಬಂದ್ ಮಾಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಂಬಂಧ ಆಡಳಿತದೊಂದಿಗೆ ಸರಣಿ ಸಭೆ ನಡೆಸಲಾಗುತ್ತಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಮಾಹಿತಿ ನೀಡಿದ್ದಾರೆ.
ಏ.2 ರಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಹೇಳಿದ್ದಾರೆ. ಗುರುವಾರದಂದು ಮಹಾರಾಷ್ಟ್ರದಲ್ಲಿ 8,646 ಕೊರೋನಾ ಪ್ರಕರಣಗಳು ವರದಿಯಾಗಿದ್ದು 18 ಸಾವುಗಳು ಸಂಭವಿಸಿದ್ದು, 5,000 ಮಂದಿ ಚೇತರಿಕೆ ಕಂಡುಬಂದಿದ್ದಾರೆ.