HEALTH TIPS

ನಾಸಿಕ್: ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆ: 20ಕ್ಕೂ ಹೆಚ್ಚು ಕೋವಿಡ್ ರೋಗಿಗಳ ಸಾವು

          ನಾಸಿಕ್: ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದ, ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20 ಕೋವಿಡ್-19 ರೋಗಿಗಳೂ ಸೇರಿ ಒಟ್ತು 22 ಮಂದಿ ಸಾವನ್ನಪ್ಪಿದ್ದಾರೆ.


        ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಸ್ಟೋರೇಜ್ ಟ್ಯಾಂಕ್ ನಲ್ಲಿದ್ದ ಆಮ್ಲಜನಕ ಬೃಹತ್ ಪ್ರಮಾಣದಲ್ಲಿ ಸೋರಿಕೆಯಾಗಿದೆ, ಈ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಎಂದು ಹೇಳಿದ್ದಾರೆ.

       ನಾಸಿಕ್ ಮಹಾನಗರ ಪಾಲಿಕೆಯಿಂದ ಕೋವಿಡ್-19 ನಿರ್ವಹಣೆಯಾಗುತ್ತಿದ್ದ ಆಸ್ಪತ್ರೆ ಇದಾಗಿದೆ.ಇತ್ತೀಚಿನ ಮಾಹಿತಿಯ ಪ್ರಕಾರ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸಾವನ್ನಪ್ಪಿದ್ದಾರೆ. ಈ ಸೋರಿಕೆಯಿಂದ ಆಕ್ಸಿಜನ್ ಪೂರೈಕೆ ಕುಸಿದು ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟಾರೆ 150 ರೋಗಿಗಳ ಪೈಕಿ 127 ಮಂದಿಗೆ ಆಕ್ಸಿಜನ್ ನೀಡಲಾಗುತ್ತಿತ್ತು. ಸೋರಿಕೆಯಾಗುತ್ತಿರುವ ಆಕ್ಸಿಜನ್ ನ ವಿಡಿಯೋ ವೈರಲ್ ಆಗತೊಡಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries