ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 220 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 40 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ:
ಕಾಸರಗೋಡು ನಗರಸಭೆ 6, ಮಧೂರು ಪಂಚಾಯತ್ 2, ಕುತ್ತಿಕೋಲು ಪಂಚಾಯತ್ 2, ಕುಂಬಡಾಜೆ ಪಂಚಾಯತ್ 1, ಕಾರಡ್ಕ ಪಂಚಾಯತ್ 2, ಮಂಜೇಶ್ವರ ಪಂಚಾಯತ್ 1, ಮೀಂಜ ಪಂಚಾಯತ್ 1, ಬೇಡಡ್ಕ ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 11, ಚೆಂಗಳ ಪಂಚಾಯತ್ 4, ಎಣ್ಮಕಜೆ ಪಂಚಾಯತ್ 2, ಕಾಞಂಗಾಡ್ ನಗರಸಭೆ 22, ಅಜಾನೂರು ಪಂಚಾಯತ್ 15, ಬಳಾಲ್ ಪಂಚಾಯತ್ 1, ಚೆರುವತ್ತೂರು ಪಂಚಾಯತ್ 13, ಮಡಿಕೈ ಪಂಚಾಯತ್ 7, ಪಡನ್ನ ಪಂಚಾಯತ್ 7, ಪಳ್ಳಿಕ್ಕರೆ ಪಂಚಾಯತ್ 14, ಪಿಲಿಕೋಡ್ ಪಂಚಾಯತ್ 11, ಉದುಮಾ ಪಂಚಾಯತ್ 2, ನೀಲೇಶ್ವರ ನಗರಸಭೆ 27, ವೆಸ್ಟ್ ಏಲೇರಿ ಪಂಚಾಯತ್ 7, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 9, ಪುಲ್ಲೂರು-ಪೆರಿಯ ಪಂಚಾಯತ್ 18, ಕೋಡೋಂ-ಬೆಳ್ಳೂರು ಪಂಚಾಯತ್ 1, ಕಿನಾನೂರು-ಕರಿಂದಳಂ ಪಂಚಾಯತ್ 10, ಕಯ್ಯೂರು-ಚೀಮೇನಿ ಪಂಚಾಯತ್ 18, ಈಸ್ಟ್ ಏಳೇರಿ ಪಂಚಾಯತ್ 2 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.
ನೆಗೆಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ:
ಕಾಸರಗೋಡು ನಗರಸಭೆ 1, ಚೆಂಗಳ ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 1, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಬೇಡಡ್ಕ ಪಂಚಾಯತ್ 3, ಕಾಞಂಗಾಡ್ ನಗರಸಭೆ 3, ಮಡಿಕೈ ಪಂಚಾಯತ್ 3, ಅಜಾನೂರು ಪಂಚಾಯತ್ 2, ಬಳಾಲ್ ಪಂಚಾಯತ್ 2, ಪಡನ್ನ ಪಂಚಾಯತ್ 1, ಪಳ್ಳಿಕ್ಕರೆ ಪಂಚಾಯತ್ 1, ಪನತ್ತಡಿ ಪಂಚಾಯತ್ 1, ಉದುಮಾ ಪಂಚಾಯತ್ 2, ನೀಲೇಶ್ವರ ನಗರಸಭೆ 1, ವೆಸ್ಟ್ ಏಳೇರಿ ಪಂಚಾಯತ್ 3, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 4, ಪುಲ್ಲೂರು-ಪೆರಿಯ ಪಂಚಾಯತ್ 6 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನಿಗಾ ವಿವರಗಳು:
ಕಾಸರಗೋಡು ಜಿಲ್ಲೆಯಲ್ಲಿ 9841 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 9339 ಮಂದಿ, ಸಾಂಸ್ಥಿಕವಾಗಿ 502 ಮಂದಿ ನಿಗಾದಲ್ಲಿರುವರು. ನೂತನವಾಗಿ 1155 ಮಂದಿ ನಿಗಾ ಪ್ರವೇಶಿಸಿದ್ದಾರೆ. 687 ಮಂದಿ ಸೋಮವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 2548 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 217 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ:
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 34584 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 31718 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 2541 ಮಂದಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.