HEALTH TIPS

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 2.95 ಲಕ್ಷ ಹೊಸ ಕೇಸ್ ಪತ್ತೆ, 2.023 ಮಂದಿ ಸಾವು

      ನವದೆಹಲಿ: ಭಾರತದಲ್ಲಿ ಕೊರೋನಾ ಆಬ್ಬರ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,95,041 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

      ದೇಶದಲ್ಲಿ ಒಂದೇ ದಿನ 2,95,041 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,023 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ. 

      ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,57,538ಕ್ಕೆ ಏರಿಕೆಯಾಗಿದೆ. 

      ಭಾರತದಲ್ಲಿ ಒಂದೇ ದಿನ 16,39,357 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,10,53,392 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

     ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 13,01,19,310 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries