ಮಳಪ್ಪುರಂ: ಕೇರಳದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುವುದಕ್ಕೂ ಎರಡು ದಿನಗಳ ಮುನ್ನ ಯುಡಿಎಫ್ ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದಾರೆ.
ನೀಲಾಂಬುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿವಿ ಪ್ರಕಾಶ್ (56) ಮಳಪ್ಪುರಂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಆಗಿದ್ದರು.
ಗುರುವಾರ ಮುಂಜಾನೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಿಲಾಂಬುರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಈ ಹಿಂದೆಯೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಕಾಶ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದರು. ಪ್ರಕಾಶ್ ನಿಧನಕ್ಕೆ ವಿಪಕ್ಷ ನಾಯಕ ರಮೇಶ್ ಚೆನ್ನಿತಲ ಸಂತಾಪ ಸೂಚಿಸಿದ್ದಾರೆ. "ಪ್ರಕಾಶ್ ಅವರ ನಿಧನದಿಂದ ದುಃಖವಾಗಿದೆ, ಅವರು ನೀಲಾಂಬುರ್ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸ ಹೊಂದಿದ್ದರು" ಎಂದು ಹೇಳಿದ್ದಾರೆ.