HEALTH TIPS

"ಕೊರೊನಾ ಶಿಷ್ಟಾಚಾರ ಪಾಲಿಸದಿದ್ದರೆ ಮೇ 2 ಮತಎಣಿಕೆಗೆ ಅವಕಾಶವಿಲ್ಲ"

           ನವದೆಹಲಿ : ಕೇಂದ್ರ ಚುನಾವಣಾ ಆಯೋಗ ಕೊರೊನಾವೈರಸ್ ಶಿಷ್ಟಾಚಾರ ಪಾಲನೆ ಬಗ್ಗೆ ನೀಲನಕ್ಷೆ ಸಲ್ಲಿಸದಿದ್ದಲ್ಲಿ ಮೇ 2ರಂದು ಮತ ಎಣಿಕೆಗೆ ಅವಕಾಶ ನೀಡುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

        ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾ. ಸೆಂಥಿಲ್ ಕುಮಾರ್ ರಾಮಮೂರ್ತಿ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಿತು. ದೇಶಾದ್ಯಂತ ಕೊವಿಡ್-19 ಎರಡನೇ ಅಲೆ ವೇಗ ಹೆಚ್ಚಿರುವುದರ ಮಧ್ಯೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರಕ್ಕೆ ಅನುಮತಿ ನೀಡಿರುವ ಆಯೋಗದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ.

       ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆಯು ಮೇ 2ರಂದು ನಡೆಯಲಿದೆ. ಈ ವೇಳೆಯಲ್ಲಿ ಕೊರೊನಾವೈರಸ್ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನೋಡಿಕೊಳ್ಳುವಂತೆ ಕೋರಿ ಸಾರಿಗೆ ಸಚಿವ ಎಂ ಆರ್ ವಿಜಯ್ ಭಾಸ್ಕರ್ ಅರ್ಜಿ ಸಲ್ಲಿಸಿದ್ದರು.

ಕೊರೊನಾ ಆತಂಕದ ನಡುವೆ ಮತಎಣಿಕೆ ಪ್ರಕ್ರಿಯೆ

         ಅರ್ಜಿದಾರರ ಪ್ರಕಾರ, 77 ಅಭ್ಯರ್ಥಿಗಳು ಇರುವ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತಎಣಿಕೆ ಪ್ರಕ್ರಿಯೆಯನ್ನು ಕೊವಿಡ್-19 ಶಿಷ್ಟಾಚಾರಗಳ ಅಡಿ ನಡೆಸಲಾಗುತ್ತದೆ. ಪ್ರತಿಯೊಂದು ಮತದ ಎಣಿಕೆ, ಪ್ರದರ್ಶನ ಮತ್ತು ಘೋಷಣೆ ಬಳಿಕ ಚುನಾವಣಾ ಏಜೆಂಟರು ಅದನ್ನು ಖಚಿತಪಡಿಸಿಕೊಳ್ಳುತ್ತಾರೆ. ತದನಂತರದಲ್ಲೇ ಮುಂದಿನ ಹಂತದ ಮತಎಣಿಕೆ ಕಾರ್ಯ ನಡೆಸಲಾಗುತ್ತದೆ. ಇಂಥ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚುವರಿ ಸಿಸಿ ಕ್ಯಾಮರಾ ಅಳವಡಿಸಬೇಕಿದೆ.

                    ಚುನಾವಣಾ ಆಯೋಗದ ವಾದ:

     ಹೈಕೋರ್ಟ್ ಎಚ್ಚರಿಕೆ ನಡುವೆಯೂ ಸುರಕ್ಷತೆಗೆ ಸೂಕ್ತ ರೀತಿಯ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ವಾದಿಸಿತು. ಕೊವಿಡ್-19 ಸುರಕ್ಷತೆ ಬಗ್ಗೆ ಅಫಿಡವಿಟ್ ಸಲ್ಲಿಸುವುದಾಗಿ ಭರವಸೆ ನೀಡಿದೆ.

                 ನೀವೇನು ಅನ್ಯಗ್ರಹದಲ್ಲಿದ್ದೀರಾ?:

     ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆಯೂ ಹೇಗೆ ನೀವು ಪ್ರಚಾರಕ್ಕೆ ಅನುಮತಿ ನೀಡಿದ್ದೀರಿ. ನೀವೇನು ಅನ್ಯಗ್ರಹದಲ್ಲಿ ಇದ್ದೀರಾ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಅಲ್ಲದೇ, ನಿಮ್ಮ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿಕೊಳ್ಳುವುದಕ್ಕೂ ಅವಕಾಶವಿದೆ ಎಂದು ಕೋರ್ಟ್ ಹೇಳಿದೆ.

      ಪಶ್ಚಿಮ ಬಂಗಾಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕದ ನಡುವೆ ಸೋಮವಾರ 7ನೇ ಹಂತದ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ.

ಸೋಮವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತವರು ಕ್ಷೇತ್ರ ಬಾಬನಿಪುರ್ ಸೇರಿದಂತೆ 34 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 284 ಅಭ್ಯರ್ಥಿಗಳ ಭವಿಷ್ಯವನ್ನು ರಾಜ್ಯದ 86 ಲಕ್ಷ ಜನ ಮತದಾರರು ನಿರ್ಧರಿಸಲಿದ್ದಾರೆ.

       ಪಶ್ಚಿಮ ಬಂಗಾಳದಲ್ಲಿ 7ನೇ ಹಂತದ ಚುನಾವಣೆ ಹಿನ್ನೆಲೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಕಳೆದ ಏಪ್ರಿಲ್ 10ರಂದು ನಡೆದ 4ನೇ ಹಂತದ ಚುನಾವಣೆ ಸಂದರ್ಭದಲ್ಲಿ ಕೂಚ್ ಬೆಹರ್ ಪ್ರದೇಶದಲ್ಲಿ ಘರ್ಷಣೆ ನಡೆದಿದ್ದು, ಐವರು ಮೃತಪಟ್ಟಿದ್ದರು. ಈ ಘಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಕೇಂದ್ರದ 796 ಕಂಪನಿಯ ಭದ್ರತಾ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

              ಕೊರೊನಾ ಶಿಷ್ಟಾಚಾರ ಪಾಲನೆ ಬಗ್ಗೆ ಲಕ್ಷ್ಯ:

    ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೊರೊನಾವೈರಸ್ ಸೋಂಕು ಹರಡದಂತೆ ಜಾಗೃತಿ ವಹಿಸಲಾಗಿದೆ. ಮತಗಟ್ಟೆಗಳಲ್ಲಿ ಕೊವಿಡ್-19 ಶಿಷ್ಟಾಚಾರಗಳನ್ನು ಕಡ್ಡಾಯವಾಗಿ ಪಾಲಿಸುವುದಕ್ಕೆ ಸೂಚನೆ ನೀಡಲಾಗಿದೆ. ಏಕೆಂದರೆ ರಾಜ್ಯದಲ್ಲಿ ಭಾನುವಾರ ಒಂದೇ ದಿನ 15,889 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ 88,800 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

                    ಪಶ್ಚಿಮ ಬಂಗಾಳದಲ್ಲಿ ಮತಗಟ್ಟೆಗಳ ಸಂಖ್ಯೆ:

     ರಾಜ್ಯದ ಮುರ್ಷಿದಾಬಾದ್ ಮತ್ತು ಪಶ್ಚಿಮ ಬರ್ಧಮಾನ್ ಜಿಲ್ಲೆಗಳಲ 9 ವಿಧಾನಸಭಾ ಕ್ಷೇತ್ರಗಳಲ್ಲಿ 12,068 ಮತಗಟ್ಟೆಗಳನ್ನು ತೆರೆಯಲಾಗಿದೆ. ದಕ್ಷಿಣ ದಿನಾಜ್ ಪುರ್ ಮತ್ತು ಮಾಲ್ದಾದಲ್ಲಿ 6 ಮತ್ತು ಕೋಲ್ಕತ್ತಾದಲ್ಲಿ ನಾಲ್ಕು ಮತಗಟ್ಟೆಗಳನ್ನು ತೆರೆಯಲಾಗಿದೆ.

       ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ಸಿನ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ತವರು ಕ್ಷೇತ್ರ ಬಾಬನಿಪುರ್ ಮೇಲೆ ಎಲ್ಲರ ಲಕ್ಷ್ಯ ನೆಟ್ಟಿದೆ. ಈ ಬಾರಿ ನಂದಿಗ್ರಾಮ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವ ದೀದಿ, ತಮ್ಮ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವುದಕ್ಕಾಗಿ ರಾಜ್ಯದ ಇಂಧನ ಸಚಿವ ಸೊಭಾಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಟಿಕೆಟ್ ನೀಡಿದ್ದಾರೆ. ಬಾಬಿನಿಪುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರುದ್ರನೀಲ್ ಘೋಷ್ ಸ್ಪರ್ಧಿಸಿದ್ದು, ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಇವರು ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries