ಕುಂಬಳೆ: ಏಪ್ರಿಲ್ 6 ರಮದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಸರಗೋಡು-ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಕಾಸರಗೋಡಿನ ಕನ್ನಡಿಗರ ಮುಖಾಮುಖಿ ಕಾರ್ಯಕ್ರಮ ಏ.3 ರಂದು ಅಪರಾಹ್ನ 2.30 ರಿಂದ ಕುಂಬಳೆ ರೈಲು ನಿಲ್ದಾಣ ಪರಿಸರದ ಎಂ.ಎಂ.ಟ್ಯೂರಿಸ್ಟ್ ಹೋಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಭಾಷಾ ಅಲ್ಪಸಂಖ್ಯಾತರಾದ ಕನ್ನಡ ವಿದ್ಯಾರ್ಥಿಗಳು, ಕನ್ನಡ ಬಲ್ಲ ಸರ್ಕಾರಿ ನೌಕರರು, ಅಂಗನವಾಡಿ ಶಿಕ್ಷಕಿಯರು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕನ್ನಡ ಬಲ್ಲ ಅಭ್ಯರ್ಥಿಗಳ ಆಯ್ಕೆಗಾಗಿ ಪಿಎಸ್ಸಿ ನಡೆಸಿದ ಪರೀಕ್ಷಾರ್ಥಿಗಳು, ಹೆಚ್ಚಿನ ಸಂಖ್ಯೆಯ ಕನ್ನಡ ಭಾಷಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳುಕ್ಕುರಾಯ, ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.