ನವದೆಹಲಿ: ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ 3.5 ಲಕ್ಷ ದಾಟಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,52,991 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 2,19,272 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಚೇತರಿಕೆಯಾದವರ ಸಂಖ್ಯೆ 1,43,04,382ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2812 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,95,123 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 28,13,658 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,02,367 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 27,93,21,177 ಕೋವಿಡ್ ಪರೀಕ್ಷೆಗಳನ್ನು ನಡೆಸಿದಂತಾಗಿದೆ. ಅಂತೆಯೇ ದೇಶದಲ್ಲಿ ಈ ವರೆಗೂ 14,19,11,223 ಡೋಸ್ ಲಸಿಕೆ ನೀಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.