HEALTH TIPS

ಕೋವಿಡ್‌: 45 ವರ್ಷ ಮೇಲ್ಪಟ್ಟ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಲು ಕೇಂದ್ರ ಸೂಚನೆ

        ನವದೆಹಲಿ: ಕೋವಿಡ್‌-19 ನಿಯಂತ್ರಿಸುವ ನಿಟ್ಟಿನಲ್ಲಿ 45 ವರ್ಷ ಮತ್ತು ಅದಕ್ಕಿಂತಲೂ ಮೇಲ್ಪಟ್ಟ ವಯಸ್ಸಿನ ಎಲ್ಲ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳುವಂತೆ ಸರ್ಕಾರ ಮಂಗಳವಾರ ಸೂಚಿಸಿದೆ.

      ಲಸಿಕೆ ಹಾಕಿಸಿಕೊಂಡ ನಂತರವೂ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಆಗಾಗ್ಗೆ ಕೈಗಳನ್ನು ತೊಳೆಯುವುದು ಮತ್ತು ಶುಚಿಗೊಳಿಸುವುದು, ಮಾಸ್ಕ್‌ ಧರಿಸುವುದು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು ಎಂದು ಸಿಬ್ಬಂದಿ ಸಚಿವಾಲಯ ಆದೇಶದಲ್ಲಿ ಪ್ರಕಟಿಸಿದೆ.

         ಪ್ರಸ್ತುತ 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲ ವ್ಯಕ್ತಿಗಳೂ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. 'ಕೇಂದ್ರ ಸರ್ಕಾರದ ಸಿಬ್ಬಂದಿಯೂ ತಾವಾಗಿಯೇ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು...' ಎಂದು ಆದೇಶದಲ್ಲಿ ತಿಳಿಸಲಾಗಿದೆ.

         ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಮಂಗಳವಾರ ಬೆಳಗ್ಗಿನ ವರೆಗೂ 24 ಗಂಟೆಗಳ ಅಂತರದಲ್ಲಿ ದೇಶದಲ್ಲಿ ಕೋವಿಡ್‌ ದೃಢಪಟ್ಟ 96,982 ಪ್ರಕರಣಗಳು ದಾಖಲಾಗಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries