ನವದೆಹಲಿ: ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ, 45 ವರ್ಷಗಳ ಮೇಲ್ಪಟ್ಟ ತನ್ನ ಉದ್ಯೋಗಿಗಳಿಗೆ ಲಸಿಕೆ ಪಡೆಯುವಂತೆ ಸೂಚನೆ ನೀಡಿದೆ
ಲಸಿಕೆ ಪಡೆದ ಬಳಿಕವೂ ನಿಯಮಿತವಾಗಿ ಕೈ ತೊಳೆದುಕೊಳ್ಳುವುದು, ಸ್ಯಾನಿಟಿಸೇಷನ್, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್-19 ಸೋಂಕು ಹರಡದಂತೆ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕೆಂದು ಕೇಂದ್ರ ಸರ್ಕಾರ ಹೇಳಿದೆ.
"ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಲಸಿಕೆ ಪಡೆಯುವುದಕ್ಕೆ ರೂಪಿಸಲಾಗಿರುವ ಆದ್ಯತೆಯ ಗುಂಪುಗಳ ಪೈಕಿ ಈಗ 45 ವರ್ಷಗಳ ಮೇಲ್ಪಟ್ಟವರು ಮಾತ್ರ ಲಸಿಕೆ ಪಡೆಯುತ್ತಿದ್ದಾರೆ. ಈಗ 45 ವರ್ಷಗಳ ಮೇಲ್ಪಟ್ಟ ಕೇಂದ್ರ ಸರ್ಕಾರದ ಎಲ್ಲಾ ಉದ್ಯೋಗಿಗಳು ಲಸಿಕೆ ಪಡೆದುಕೊಳ್ಳತಕ್ಕದ್ದು" ಎಂದು ಕೇಂದ್ರ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ.