ಮಧೂರು: ಕುಂಬಳೆ ಸೀಮೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕಾಗಿ ಗೊನೆ ಮುಹೂರ್ತ ಗುರುವಾರ ನೆರವೇರಿತು. ದೇವಸ್ಥಾನದ ಮುಖ್ಯ ಅರ್ಚಕ ವಿ. ಶ್ರೀಕೃಷ್ಣ ಉಪಾಧ್ಯಾಯ ಅವರ ವಿಶೇಷ ಪ್ರಾರ್ಥನೆ ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ. ಬಾಬು, ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಟ್ರಸ್ಟೀ ವೆಂಕಟ್ರಮಣ ಹೊಳ್ಳ, ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು. ದೇವಸ್ಥಾನದಲ್ಲಿ ಏ. 11ರಿಂದ 15ರ ವರೆಗೆ ಉತ್ಸವ ನಡೆಯಲಿದೆ. 14ರಂದು ವಿಷು ಅಂಗವಾಗಿ ವಿಶೇಷ ಕಾರ್ಯಕ್ರಮ ಜರುಗಲಿದೆ.