ನವದೆಹಲಿ,: ದೇಶದಲ್ಲಿ ಕೊರೊನಾ ಲಸಿಕೆ ಪಡೆದ ಬಳಿಕವೂ ಕೊರೊನಾ ಸೋಂಕು ತಗುಲುತ್ತಿದ್ದು, ಈ ಕುರಿತು ಕೇಂದ್ರವು ಮಾಹಿತಿಯನ್ನು ಕಲೆ ಹಾಕುತ್ತಿದೆ.
ಕೊರೊನಾ ಲಸಿಕೆ ಬಳಿಕವೂ ಯಾರಿಗೆ ಕೊರೊನಾ ತಗುಲುತ್ತದೋ ಅಂಥವರ ಮಾಹಿತಿಯನ್ನು ಪಡೆಯಲಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1.5 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಕೊರೊನಾ ಸೋಂಕು ಆರಂಭವಾದ ಜನವರಿಯಿಂದ ಇದೇ ಮೊದಲ ಬಾರಿಗೆ ಇಷ್ಟೊಂದು ಕೊರೊನಾ ಸೋಂಕು ದಾಖಲಾಗಿದೆ. ಭಾರತದಲ್ಲಿ ಕೊರೊನಾಆರ್ಭಟ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 8,70,77,474 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.