ಮುಂಬೈ: ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿ 22 ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಅಪರಿಚತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ನಾಸಿಕ್ ನಗರದ ಭದ್ರಕಾಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304-ಎ ಅಡಿಯಲ್ಲಿ (ನಿರ್ಲಕ್ಷ್ಯದಿಂದ ಸಾವು ಸಂಭವಿಸಿರುವುದು) ಎಫ್‌ಐಆರ್ ದಾಖಲಿಸಲಾಗಿದೆ.
ಬುಧವಾರ ಮಧ್ಯಾಹ್ನ ಆಮ್ಲಜನಕ ಪೂರೈಕೆಯಲ್ಲಿ ದಿಢೀರನೆ ಉಂಟಾದ ವ್ಯತ್ಯಯದಿಂದ ಇಲ್ಲಿನ ಡಾ. ಝಾಕೀರ್ ಹುಸೇನ್ ಆಸ್ಪತ್ರೆಯಲ್ಲಿ 22 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.
ವೈದ್ಯಕೀಯ ಆಮ್ಲಜನಕ ಸಂಗ್ರಹಿಸುವ ಘಟಕದಲ್ಲಿ ಸೋರಿಕೆಯಾದ ಕಾರಣ ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿ ಈ ಸಾವುಗಳು ಸಂಭವಿಸಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದರು.