ತಿರುವನಂತಪುರ: ಸಾರ್ವಜನಿಕ ಸೇವಾ ಆಯೋಗ (ಪಿಎಸ್‍ಸಿ) ಮೇ 4 ರಿಂದ 7 ರವರೆಗೆ ನಡೆಸಲು ಉದ್ದೇಶಿಸಿದ್ದ ಹೆಚ್ಚಿನ ಪರೀಕ್ಷೆಗಳನ್ನು ಮುಂದೂಡಿದೆ. ಕೊರೋನಾ ಪ್ರಸರಣ ತೀವ್ರಗೊಳ್ಳುತ್ತಿದ್ದಂತೆ ಈ ಕ್ರಮಕ್ಕೆ ಆಯೋಗ ಮುಂದಾಗಬೇಕಾಯಿತು.
ಮಂಗಳವಾರದಿಂದ ನಡೆಯಬೇಕಿದ್ದ ಪರೀಕ್ಷೆ ಮತ್ತು ಸಂದರ್ಶನಗಳನ್ನು ಪಿಎಸ್‍ಸಿ ಈಗಾಗಲೇ ಮುಂದೂಡಿತ್ತು. ಇದರ ಬೆನ್ನಲ್ಲೇ ಮುಂದಿನ ತಿಂಗಳು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಗಳ ಪರಿಷ್ಕøತ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪಿಎಸ್‍ಸಿ ತಿಳಿಸಿದೆ.
ಪ್ರಸ್ತುತ ಸಂದರ್ಭಗಳಲ್ಲಿ ಪರೀಕ್ಷೆಗಳನ್ನು ನಡೆಸುವುದು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಪಿಎಸ್‍ಸಿ ಅಭಿಪ್ರಾಯಪಟ್ಟಿದೆ. ರೋಗ ಹರಡಿದ ಕಾರಣ ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿದೆ.