ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾರ್ಚ್ 27ಕ್ಕೆ ಕೊರೊನಾ ಸೋಂಕು ತಗುಲಿತ್ತು.
ಈ ಕುರಿತು ಸಚಿನ್ ತೆಂಡೂಲ್ಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ನಿಮ್ಮ ಹಾರೈಕೆಗೆ ಧನ್ಯವಾದಗಳು, ಕೊರೊನಾ ಸೋಂಕು ತಗುಲಿರುವ ಕಾರಣ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ಕೆಲವೇ ದಿನಗಳಲ್ಲಿ ಚೇತರಿಸಿಕೊಂಡು ಮನೆಗೆ ವಾಪಸಾಗುತ್ತೀನಿ ಎನ್ನುವ ನಂಬಿಕೆ ಇದೆ.
ಪ್ರತಿಯೊಬ್ಬರು ನಿಮ್ಮ ಆರೋಗ್ಯದ ಬಗ್ಗೆ ನಿಗಾ ಇರಿಸಿ ಸುರಕ್ಷಿತವಾಗಿ ಮನೆಯಲ್ಲಿಯೇ ಇರಿ' ಎಂದು ಸಲಹೆ ನೀಡಿದ್ದಾರೆ.
ಹಾಗೆಯೇ 10 ವರ್ಷಗಳ ಹಿಂದೆ ವಿಶ್ವಕಪ್ ಗೆಲುವಿನ ಕುರಿತು ಕೂಡ ನೆನಪು ಮೆಲುಕು ಹಾಕಿದ್ದು, ಭಾರತೀಯ ತಂಡದ ಆಟಗಾರರಿಗೆ ಶುಭಾಶಯ ತಿಳಿಸಿದ್ದಾರೆ. ಅಂದಿನ ವಿಶ್ವಕಪ್‌ನಲ್ಲಿ ತಾನು ಭಾಗಿಯಾಗಿದ್ದ ಅನುಭವವನ್ನು ಹಂಚಿಕೊಂಡಿದ್ದಾರೆ.
ತೆಂಡೂಲ್ಕರ್ ಅವರಿಗೆ ಮಾರ್ಚ್ 27 ರಂದು ಕೊರೊನಾ ಸೋಂಕು ತಗುಲಿತ್ತು. ಅವರ ಕುಟುಂಬದವರೆಲ್ಲರಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ, ತೆಂಡೂಲ್ಕರ್ ಇಷ್ಟು ದಿನ ಗೃಹಬಂಧನದಲ್ಲಿದ್ದು, ಈಗ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.