ತಿರುವನಂತಪುರ: ಇತರ ರಾಜ್ಯಗಳಿಂದ ಕೇರಳಕ್ಕೆ ಬರುವವರಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಇತರ ರಾಜ್ಯಗಳಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಅಥವಾ 14 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಹರಡುವಿಕೆಯ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗಿದೆ.
ಕೇರಳಕ್ಕೆ ಆಗಮಿಸುವ ಪ್ರತಿಯೊಬ್ಬರೂ ಇ-ಜಾಗ್ರತಾ ಪೆÇೀರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳಬೇಕು. ಲಸಿಕೆ ಪಡೆದವರೂ ರಾಜ್ಯಕ್ಕೆ ಬರುವ ಮೊದಲು 48 ಗಂಟೆಗಳ ಒಳಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಗಾಗಬೇಕು. ಇಲ್ಲದವರು ರಾಜ್ಯ ತಲುಪಿದ ಕೂಡಲೇ ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಫಲಿತಾಂಶಗಳನ್ನು ಪಡೆಯುವವರೆಗೆ ಮನೆಯಲ್ಲಿ ಕ್ವಾರಂಟೈನ್ ಗೊಳಗಾಗಬೇಕು ಎಂದು ಹೇಳುತ್ತದೆ.
ಪರೀಕ್ಷೆಯಲ್ಲಿ ಕೊರೋನಾ ದೃಢಪÀಟ್ಟರೆ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ದೂರವನ್ನು ಇಟ್ಟುಕೊಳ್ಳುವುದು ಮತ್ತು ಕೈಗಳನ್ನು ಸ್ವಚ್ಚವಾಗಿರಿಸಿಕೊಳ್ಳುವುದು ಮುಂತಾದ ಕೋವಿಡ್ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜ್ವರ, ಕೆಮ್ಮು, ನೋಯುತ್ತಿರುವ ಗಂಟಲು, ಉಸಿರಾಟದ ತೊಂದರೆ, ದೇಹದ ನೋವು, ಆಯಾಸ, ವಾಸನೆ ಗ್ರಹಿಸಲು ಅನನುಕೂಲವಾಗುವುದು, ಅತಿಸಾರ ಮುಂತಾದ ಯಾವುದೇ ರೋಗಲಕ್ಷಣಗಳನ್ನು ಗಮನಿಸಿದರೆ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಲು ಸೂಚಿಸಲಾಗಿದೆ.
ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಗಾಗದವರನ್ನು 14 ದಿನಗಳವರೆಗೆ ಕ್ವಾರಂಟೈನ್ ಗೊಳಪಡಿಸಲಾಗುತ್ತದೆ. ಈ ಮಧ್ಯೆ, ಕೊರೋನಾ ಲಕ್ಷಣಗಳು ಕಾಣಿಸಿಕೊಂಡರೆ ಅಧಿಕಾರಿಗಳನ್ನು ಸಂಪರ್ಕಿಸಲು ಆರೋಗ್ಯ ಇಲಾಖೆ ಶಿಫಾರಸು ಮಾಡಿದೆ.