ನವದೆಹಲಿ: ಎರಡೆರಡು ಬಾರಿ ರೂಪಾಂತರಗೊಂಡ ಕೊರೊನಾ ವೈರಸ್ (SARS-CoV-2) ವಿರುದ್ಧವೂ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನ ತಿಳಿಸಿದೆ.
'ಕೊವ್ಯಾಕ್ಸಿನ್ ಲಸಿಕೆಯು ಕೊರೊನಾ ವೈರಸ್‌ನ ಹಲವು ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ. ಜತೆಗೆ, ಎರಡೆರಡು ಬಾರಿ ರೂಪಾಂತರಗೊಂಡ ವೈರಸ್ ವಿರುದ್ಧವೂ ಪರಿಣಾಮಕಾರಿಯಾಗಿರುವುದು ಅಧ್ಯಯನದಿಂದ ತಿಳಿದುಬಂದಿದೆ' ಎಂದು ಐಸಿಎಂಆರ್ ಟ್ವೀಟ್ ಮಾಡಿದೆ.
ಕೊವ್ಯಾಕ್ಸಿನ್ ಲಸಿಕೆಯನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ಭಾರತ್ ಬಯೋಟೆಕ್ ಕಂಪನಿಯು ಐಸಿಎಂಆರ್ ಸಹಯೋಗದಲ್ಲಿ ಲಸಿಕೆಯ ಪ್ರಯೋಗ ನಡೆಸಿತ್ತು. ಲಸಿಕೆಯು ಕ್ಲಿನಿಕಲ್ ಟ್ರಯಲ್‌ನ ಮಧ್ಯಂತರ ವಿಶ್ಲೇಷಣೆ ವೇಳೆ ಶೇ 80.6ರಷ್ಟು ಪರಿಣಾಮಕಾರಿತ್ವ ತೋರಿದೆ ಎಂದು ಇತ್ತೀಚೆಗೆ ಭಾರತ್ ಬಯೋಟೆಕ್ ಹೇಳಿತ್ತು.
ICMR study shows #COVAXIN neutralises against multiple variants of SARS-CoV-2 and effectively neutralises the double mutant strain as well. @MoHFW_INDIA @DeptHealthRes #IndiaFightsCOVID19 #LargestVaccineDrive