ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಸೋಂಕಿತರ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್ ಔಷಧದ ರಫ್ತನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತು ಭಾನುವಾರ ಪ್ರಕಟಣೆ ಹೊರಡಿಸಿರುವ ಕೇಂದ್ರ, ' ದೇಶದಲ್ಲಿ ಕೋವಿಡ್ ತಹಬದಿಗೆ ಬರುವ ವರೆಗೆ ರೆಮ್‌ಡಿಸಿವಿರ್ ಚುಚ್ಚು ಮದ್ದು ಮತ್ತು ಅದಕ್ಕೆ ಸಂಬಂಧಿಸಿದ ಔಷಧದ ಸಾಮಾಗ್ರಿಗಳ ರಫ್ತಿನ ಮೇಲೆ ನಿಷೇಧ ಹೇರಲಾಗಿದೆ,' ಎಂದು ತಿಳಿಸಿದೆ.
ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಹೆಚ್ಚಿದಂತೆಲ್ಲ ರೆಮ್‌ಡಿಸಿವಿರ್ ಬೇಡಿಕೆಯೂ ಹೆಚ್ಚತೊಡಗಿದೆ. ಕೆಲವೆಡೆ ಅಭಾವ ಉಂಟಾಗಿದ್ದಾರೆ, ಕೆಲವು ಕಡೆಗಳಲ್ಲಿ ಔಷಧವು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ.