ನವದೆಹಲಿ: ಮಾಟ-ಮಂತ್ರ, ಮೂಢನಂಬಿಕೆ ಮತ್ತು ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ಸಲ್ಲಿಕೆಯಾಗಿದೆ.
ಬಿಜೆಪಿ ಮುಖಂಡ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿರುವ ಅರ್ಜಿಯಲ್ಲಿ, ಮಾಂತ್ರಿಕ ಪ್ರಯೋಗಗಳು, ಧಾರ್ಮಿಕ ಮತಾಂತರವು ಸಂವಿಧಾನದ ಪರಿಚ್ಛೇದ 14, 21, 25ರ ಉಲ್ಲಂಘನೆ ಎಂದು ವಾದಿಸಿದ್ದಾರೆ.
ಪರಿಚ್ಛೇದದ 51ಎ ಅಡಿಯಲ್ಲಿ ಮೂಢನಂಬಿಕೆ ಮತ್ತು ಮೋಸದ ಧಾರ್ಮಿಕ ಮತಾಂತರದ ಭೀತಿಯನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳು ವಿಫಲವಾಗಿವೆ ಎಂದು ಉಪಾಧ್ಯಾಯ ಆಕ್ಷೇಪಿಸಿದ್ದಾರೆ.