ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಬಾವಿಗೆ ಬಿದ್ದು ಮೃತ್ಯು
0samarasasudhiಏಪ್ರಿಲ್ 30, 2021
ಕುಂಬಳೆ:ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ತನ್ನ ಹಿತ್ತಲಿನ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಅಶ್ಮಿತಾ (15) ಮನೆ ಹಿತ್ತಲಿನ ಬಾವಿಗೆ ಬಿದ್ದು ಸಾವನ್ನಪ್ಪಿದ ಬಾಲಕಿ.
ನಿನ್ನೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯನ್ನು ಬರೆದಿದ್ದಳು.ಆರಿಕ್ಕಾಡಿ ಸೇತುವೆ ಸಮೀಪದ ಪದ್ಮನಾಭ -ವಿಮಲಾ ದಂಪತಿಗಳ ಪುತ್ರಿ. ಸಹೋದರ ಸಹಿತ ಬಂಧುಮಿತ್ರರನ್ನು ಅಗಲಿದ್ದಾಳೆ.