ನವದೆಹಲಿ: ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್-19 ಲಸಿಕೆ ಪಡೆಯಲು ಅರ್ಹರಾಗುತ್ತಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.
ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ 50 ರಷ್ಟು ಸರಬರಾಜನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರ್ವ ಘೋಷಿತ ಬೆಲೆಗೆ ಬಿಡುಗಡೆ ಮಾಡಲು ಅಧಿಕಾರ ನೀಡಲಾಗಿದೆ.