ನವದೆಹಲಿ: ದೇಶದ ಹತ್ತು ರಾಜ್ಯಗಳಲ್ಲಿ ಕೊರೊನಾ ಸೋಂಕು ದೃಢಪಡುವ ಪ್ರಮಾಣ ಶೇ 25ರಷ್ಟು ಇಲ್ಲವೇ ಅದಕ್ಕಿಂತಲೂ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
ಕಳೆದ ಮೂರು ದಿನಗಳಿಂದ ಈ ಸಂಬಂಧ ಅಂಕಿ-ಅಂಶಗಳನ್ನು ಸಂಗ್ರಹಿಸಲಾಗಿದ್ದು, ದಿನದಲ್ಲಿ ಪತ್ತೆಯಾಗುವ ಹೊಸ ಪ್ರಕರಣಗಳಲ್ಲಿಯೂ ಹೆಚ್ಚಳ ಕಂಡುಬಂದಿದೆ ಎಂದು ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
12 ರಾಜ್ಯಗಳಲ್ಲಿ ಲಕ್ಷಕ್ಕೂ ಅಧಿಕ ಸಕ್ರಿಯ ಕೋವಿಡ್-19 ಪ್ರಕರಣಗಳಿವೆ. 24 ರಾಜ್ಯಗಳಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ 15ಕ್ಕಿಂತ ಹೆಚ್ಚಿದೆ ಎಂದು ತಿಳಿಸಿದರು.
ದೇಶದಲ್ಲಿ ಗುರುವಾರ ಹೊಸದಾಗಿ 3,62,727 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,37,03,665ಕ್ಕೇರಿದಂತಾಗಿದೆ. ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 4,120 ಜನರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಒಟ್ಟು ಸಂಖ್ಯೆ 2,58,317ಕ್ಕೇರಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.