ತಿರುವನಂತಪುರ: ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಐಟಿ ಪ್ರಾಯೋಗಿಕ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಎಚ್.ಎಸ್.ಎಸ್. ಮತ್ತು ವಿ.ಎಚ್.ಎಸ್.ಇ. ಪ್ರಾಯೋಗಿಕ ಪರೀಕ್ಷೆಗಳು ಜೂನ್ 21 ರಿಂದ ಜುಲೈ 7 ರವರೆಗೆ ನಡೆಯಲಿದೆ ಎಂದು ಸಿಎಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಏತನ್ಮಧ್ಯೆ, ಪ್ಲಸ್ ಟು ಮೌಲ್ಯಮಾಪನ ಜೂನ್ 1 ರಿಂದ ಪ್ರಾರಂಭವಾಗಲಿದೆ ಎಂದು ಸಿಎಂ ಹೇಳಿದರು. ಎಸ್ ಎಸ್ ಎಲ್ ಸಿ ಮೌಲ್ಯಮಾಪನವೂ ಮುಂದಿನ ತಿಂಗಳ ಆರಂಭದಲ್ಲಿ ಪ್ರಾರಂಭವಾಗಲಿದೆ. ಹತ್ತನೇ ತರಗತಿಯ ಮೌಲ್ಯಮಾಪನ ಜೂನ್ 7 ರಿಂದ 25 ರವರೆಗೆ ನಡೆಯಲಿದೆ.