HEALTH TIPS

10,12ನೇ ತರಗತಿ ವಿದ್ಯಾರ್ಥಿಗಳಿಗೆ ಲಸಿಕೆ: ಪಿಐಎಲ್‌ ಸಲ್ಲಿಕೆ

       ನವದೆಹಲಿ: ಪರೀಕ್ಷೆಗೆ ಹಾಜರಾಗಲಿರುವ 10 ಮತ್ತು 12ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

      ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಅರೋಗ್ಯ ಮತ್ತು ಶಿಕ್ಷಣ ಸಚಿವಾಲಯ ಹಾಗೂ ದೆಹಲಿ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿದೆ.

      ಮುಖ್ಯ ನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಮತ್ತು ನ್ಯಾಯಮೂರ್ತಿ ಜಸ್ಮೀತ್‌ ಸಿಂಗ್‌ ಅವರನ್ನೊಳಗೊಂಡ ಪೀಠವು ಈ ನೋಟಿಸ್‌ ಜಾರಿಗೊಳಿಸಿದೆ.

       ಕೋವಿಡ್‌-19 ಲಸಿಕೆಯನ್ನು 18 ವರ್ಷದ ಕೆಳಗಿನವರಿಗೂ ನೀಡಬಹುದೇ ಎಂದು ಪೀಠವು ಪ್ರಶ್ನಿಸಿದೆ.

ವಕೀಲರಾದ ಜ್ಯೋತಿ ಅಗರವಾಲ್‌, ಸಂಜೀವಾಣಿ ಅಗರವಾಲ್‌ ಮತ್ತು ಪ್ರದೀಪ್‌ ಶೇಖಾವತ್‌ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

          '10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ' ಎಂದು ದೆಹಲಿ ಸರ್ಕಾರದ ಪರ ವಕೀಲ ಸಂತೋಷ್‌ ಕೆ. ತ್ರಿಪಾಠಿ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries