ಅಮರಾವತಿ: ಆಂಧ್ರಪ್ರದೇಶದ ಕಡಪ ಜಿಲ್ಲೆಯ ಕ್ವಾರಿಯೊಂದರಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ 10 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲುಗಳನ್ನು ಒಡೆಯಲು ರಂಧ್ರ ಕೊರೆಯುತ್ತಿದ್ದಾಗ ಸ್ಫೋಟಕಗಳು ಸಿಡಿದಿರುವುದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.
'ಮಾಮಿಲಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಜಿಲೆಟಿನ್ ಕಡ್ಡಿಗಳನ್ನು ಇಳಿಸುವಾಗ ಸ್ಫೋಟ ಸಂಭವಿಸಿದೆ. ಇದು ಪರವಾನಗಿ ಪಡೆದ ಗಣಿಯಾಗಿದೆ' ಎಂದು ಕಡಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅನ್ಬುರಾಜನ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಕಡಪ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಫೋಟದ ಬಗ್ಗೆ ಮಾಹಿತಿ ಪಡೆದಿದ್ದಾರೆ.