HEALTH TIPS

ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ಪ್ರತಿದಾಳಿ: 17 ಮಕ್ಕಳು ಸೇರಿ 67 ಮಂದಿ ಸಾವು

            ಗಾಜಾ: ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನಾ ಪಡೆಗಳು ನಡೆಸಿದ ದಾಳಿಗಳಲ್ಲಿ 17 ಮಕ್ಕಳು ಸೇರಿ 67 ಮಂದಿ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ತೇನ್‍ ಆರೋಗ್ಯ ಸಚಿವಾಲಯ ತಿಳಿಸಿದೆ.

          ಇಸ್ರೇಲ್‍ ನಡೆಸಿದ ದಾಳಿಗಳಲ್ಲಿ 115 ಮಕ್ಕಳು ಮತ್ತು 50 ಮಹಿಳೆಯರು ಸೇರಿ 338 ಪ್ಯಾಲೆಸ್ತೇನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ.

       ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನ ಹಮಾಸ್ ಬಂಡುಕೋರರ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಗಾಜಾ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ರಾಕೆಟ್ ದಾಳಿ ಪ್ರತಿದಾಳಿ ನಡೆಸುತ್ತಿದೆ.

          ಹಮಾಸ್ ಬಂಡುಕೋರರೂ ಇಸ್ರೇಲ್ ಸೇನಾಪಡೆ ಮೇಲೆ ಸರಣಿ ರಾಕೆಟ್ ದಾಳಿ ನಡೆಸಿತ್ತು. ಇದರಲ್ಲಿ ಇಬ್ಬರು ಇಸ್ರೇಲ್ ಅಧಿಕಾರಿಗಳು ಹತರಾಗಿದ್ದರು. ಇದರಿಂದಾಗಿ ಇಸ್ರೇಲ್ ಸೇನೆ ಹಮಾಸ್ ವಿರುದ್ಧ ತಿರುಗಿಬಿದ್ದಿದ್ದು ರಾಕೆಟ್ ದಾಳಿಗಳನ್ನು ನಡೆಸುತ್ತಿದೆ. ಮತ್ತೊಂದೆಡೆ, ಇಸ್ರೇಲ್ 5,000 ಮೀಸಲು ಪಡೆ ಯೋಧರನ್ನು ನಿಯೋಜಿಸುವ ಮೂಲಕ ಗಡಿಯಲ್ಲಿ ಸೇನಾಪಡೆ ಹೆಚ್ಚಿಸಿದೆ.

         ಇಸ್ರೇಲ್ ನಡೆಸಿದ ರಾಕೆಟ್ ದಾಳಿಯ ವೇಳೆ ಹಮಾಸ್ ಬಂಡುಕೋರರ ಫೀಲ್ಡ್ ಕಮಾಂಡರ್ ಮನೆ ಹಾಗೂ ಹಮಾಸ್ ಬಂಡುಕೋರರ ಗಡಿ ಸುರಂಗ ಮಾರ್ಗಗಳನ್ನು ಗುರಿ ಮಾಡಲಾಗಿತ್ತು.

       ಇಸ್ರೇಲಿ ವೈಮಾನಿಕ ದಾಳಿಯಿಂದ ಗಾಜಾ ಪಟ್ಟಿಯಲ್ಲಿರುವ ಎರಡು ಅಪಾರ್ಟ್ಮೆಂಟ್ ಗೋಪುರಗಳನ್ನು ನೆಲಸಮ ಮಾಡಲಾಗಿದೆ. ಅಲ್ಲಿ 2007 ರಲ್ಲಿ ಹಮಾಸ್ ಅಧಿಕಾರ ವಹಿಸಿಕೊಂಡಾಗಿನಿಂದ 2 ಮಿಲಿಯನ್ ಪ್ಯಾಲೆಸ್ಟೀನಿಯರು ದುರ್ಬಲ ಇಸ್ರೇಲಿ-ಈಜಿಪ್ಟ್ ದಿಗ್ಬಂಧನದ ಅಡಿಯಲ್ಲಿ ವಾಸಿಸುತ್ತಿದ್ದರು. ಅಲ್ಲಿನ ನಾಗರಿಕರಿಗೆ ಕಟ್ಟಡ ಖಾಲಿ ಮಾಡಲು ಅವಕಾಶ ಮಾಡಿಕೊಡಲಾಗಿತ್ತು. 2014ರ ಯುದ್ಧದ ಸಮಯದಲ್ಲಿ ಇಸ್ರೇಲ್ ನ ಈ ತಂತ್ರದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು.

         ಅರಬ್-ಯಹೂದಿ ದೇಶಗಳಲ್ಲಿ ಭಾರಿ ಹಿಂಸಾಚಾರ ಹಾಗೂ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲಾಡ್ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries