ನವದೆಹಲಿ: ದೇಶದಲ್ಲಿ ಒಟ್ಟು ಪ್ರಕರಣಗಳಲ್ಲಿ ಶೇ. 85ರಷ್ಟು ಪ್ರಕರಣಗಳು ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳ ಸೇರಿದಂತೆ 10 ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.
ಹನ್ನೊಂದು ರಾಜ್ಯಗಳಲ್ಲಿ ಒಂದು ಲಕ್ಷಕ್ಕಿಂತ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಎಂಟು ರಾಜ್ಯಗಳಲ್ಲಿ 50 ಸಾವಿರಕ್ಕಿಂತ ಹೆಚ್ಚ ಸಕ್ರಿಯ ಪ್ರಕರಣಗಳಿವೆ.
ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 3,26,098 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. 3,890 ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 2,43 ಕೋಟಿ ದಾಟಿದೆ. ಸದ್ಯ ದೇಶದಲ್ಲಿ 36,73,802 ಸಕ್ರಿಯ ಪ್ರಕರಣಗಳಿವೆ. ಶನಿವಾರ ಒಂದೇ 3,53,299 ಜನರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಭಾರತದ 24 ರಾಜ್ಯಗಳಲ್ಲಿ ಇದುವರೆಗೂ ಬೆಳಕಿಗೆ ಬಂದಿರುವ ಕೋವಿಡ್ ಪ್ರಕರಣಗಳ ಪ್ರಮಾಣ ಶೇ.15 ರಷ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.