ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ 19 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಖಚಿತ ಮಾಹಿತಿ ಮೇರೆಗೆ 16 ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 144 ಎ ನಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಫಾಗ್ಲಾ ಎಂಬ ಪ್ರದೇಶದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ.
ಸೇನಾಪಡೆಯ ಈ ಕಾರ್ಯಾಚರಣೆಯಿಂದಾಗಿ ಸಂಭವಿಸಿಬೇಕಾದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಸ್ಥಳದಲ್ಲಿ ಒಟ್ಚು 19 ಗ್ರೆನೇಡ್ ಗಳು ಪತ್ತೆಯಾಗಿವೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.