ತಿರುವನಂತಪುರ: ರಾಜ್ಯಾದ್ಯಂತ ಕಾಲೇಜುಗಳಲ್ಲಿ ತರಗತಿಗಳು ಜೂನ್ 1 ರಿಂದ ಪ್ರಾರಂಭವಾಗಲಿವೆ. ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಜೂನ್ 1 ಒಂದರಿಂದಲೇ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ತರಗತಿಗಳು ಆನ್‍ಲೈನ್ ಮೂಲಕ ನಡೆಯಲಿದೆ. ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.30 ರ ನಡುವೆ ತರಗತಿಗಳು ನಡೆಯುತ್ತವೆ ಎಂದು ಶಿಕ್ಷಣ ಇಲಾಖೆ ವರದಿ ಮಾಡಿದೆ.