ನವದೆಹಲಿ: ಯಾಸ್ ಚಂಡಮಾರುತ ಬರುವ ಬುಧವಾರ (ಮೇ 26) ಒಡಿಶಾ ಹಾಗೂ ಪಶ್ಚಿಮ ಬಂಗಾಳ ಕರಾವಳಿಯನ್ನು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
ಬಂಗಾಳ ಕೊಲ್ಲಿಯ ಅಂಡಮಾನ್ ಸಮೀಪ್ ಯಾಸ್ ಚಂಡಮಾರುತ ಕೇಂದ್ರಕೃತವಾಗಿದ್ದು ಬುದುವಾರದ ಸಂಜೆಯ ವೇಳೆಗೆ ಒಡಿಶಾ, ಪಶ್ಚಿಮ ಬಂಗಾಳವನ್ನು ಅಪ್ಪಳಿಸಿ ಬಾಂಗ್ಲಾದೇಶ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಹಾಗೂ ಒಡಿಶಾ, ಬಂಗಾಳ ರಾಜ್ಯ ಸರ್ಕಾರಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತರಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಂಡಮಾನ್ ಸಮೀಪ ಗಾಳಿಯ ಒತ್ತಡ ಕಡಿಮೆಯಾದಲ್ಲಿ ಯಾಸ್ ಚಂಡಮಾರುತ ದುರ್ಬಲವಾಗುವ ಸಾಧ್ಯತೆಗಳಿವೆ. ಗಾಳಿ ವೇಗ ಹೆಚ್ಚಿ ಒತ್ತಡ ತೀವ್ರಮಾದರೆ ಯಾಸ್ ಚಂಡಮಾರುತ ಭೀಕರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಾರತದ ಪಶ್ಚಿಮ ಕರಾವಳಿ ಭಾಗದಲ್ಲಿ ತೌತೆ ಚಂಡಮಾರುತ ತೀವ್ರ ಹಾನಿ ಮಾಡಿರುವ ಬೆನ್ನಲ್ಲೇ ಯಾಸ್ ಚಂಡಮಾರುತವು ದೇಶದ ಪೂರ್ವ ಹಾಗೂ ದಕ್ಷಿಣ ಕರಾವಳಿ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.