HEALTH TIPS

ಕೋವಿಡ್ ರೋಗಿಗಳ ಚಿಕಿತ್ಸೆ: 2 ಲಕ್ಷಕ್ಕೂ ಹೆಚ್ಚು ನಗದು ಸ್ವೀಕರಿಸಲು ಅನುಮತಿ

         ನವದೆಹಲಿ: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್‌ಗಳು  2 ಲಕ್ಷಕ್ಕಿಂತ ಹೆಚ್ಚು ಹಣವನ್ನು ನಗದು ರೂಪದಲ್ಲಿ ಸ್ವೀಕರಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

     ಆದಾಯ ತೆರಿಗೆ ಇಲಾಖೆಗಾಗಿ ನೀತಿ ರೂಪಿಸುವ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಶುಕ್ರವಾರ ಈ ಅಧಿಸೂಚನೆ ಹೊರಡಿಸಿದೆ.

     ಕೋವಿಡ್‌-19 ರೋಗಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

      'ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269ST ಅನ್ವಯ ಒಂದು ದಿನದಲ್ಲಿ ಒಬ್ಬ ವ್ಯಕ್ತಿಯು  2 ಲಕ್ಷಕ್ಕಿಂತ ಹೆಚ್ಚು ನಗದು ಪಡೆಯುವುದನ್ನು ನಿರ್ಬಂಧಿಸುತ್ತದೆ. ಕ‍ಪ್ಪು ಹಣ ತಡೆಯುವ ಸಂಬಂಧ 2017ರಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ರೂಪಿಸಿತ್ತು.

       'ಈ ಕಾಯ್ದೆಯಲ್ಲಿ ಹೊಸದಾಗಿ ನೀಡಲಾಗಿರುವ ಈ ಸೌಲಭ್ಯವು ಏಪ್ರಿಲ್ 1 ರಿಂದ ಮೇ 31ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರೋಗಿಯ ಪಾನ್‌ ಅಥವಾ ಆಧರ್ ಸಂಖ್ಯೆ, ಹಣ ಪಾವತಿಸುವವರು ಮತ್ತು ರೋಗಿಯ ನಡುವಿನ ಸಂಬಂಧನ್ನು ಪಡೆದುಕೊಳ್ಳಬೇಕು ಎಂಬ ನಿಬಂಧನೆಗಳನ್ನು ಸೇರಿಸಲಾಗುತ್ತಿದೆ' ಎಂದು ಹೊಸ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries