ನವದೆಹಲಿ: ವಿವಿಧ ರಾಜ್ಯಗಳಿಗೆ ಮೂರು ದಿನಗಳಲ್ಲಿ ಕೋವಿಡ್ ಲಸಿಕೆಯ 51 ಲಕ್ಷ ಡೋಸ್‌ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
'ಕೋವಿಡ್ ಲಸಿಕೆಯ 50,95,640 ಡೋಸ್‌ಗಳು ಶೀಘ್ರವೇ ಕೈಸೇರಲಿವೆ. ಇವುಗಳನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗುವುದು' ಎಂದು ಸಚಿವಾಲಯ ತಿಳಿಸಿದೆ.
ಈ ವರೆಗೆ ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 20 ಕೋಟಿಗೂ ಅಧಿಕ ಡೋಸ್‌ಗಳಷ್ಟು ಲಸಿಕೆಯನ್ನು ಉಚಿತವಾಗಿ ನೀಡಿದೆ ಎಂದೂ ಸಚಿವಾಲಯ ತಿಳಿಸಿದೆ.