ಕಾಸರಗೋಡು: ಕಾಸರಗೋಡು ಜಿಲ್ಲೆಯ ಪರಿಶಿಷ್ಟ ಜಾತಿ-ಪಂಗಡ ಕಾಲನಿಗಳಲ್ಲಿ 45ಕ್ಕಿಂತ ಅಧಿಕ ವಯೋಮಾನದ ಮಂದಿಗೆ ಕೋವಿಡ್ ವಾಕ್ಸಿನೇಷನ್ ತ್ವರಿತವಾಗಿ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.
ಕಾಸರಗೋಡು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು.
ಈ ನಿಟ್ಟಿನಲ್ಲಿ ನೋಂದಣಿ ಕ್ರಮಗಳನ್ನು ಪೂರ್ಣಗೊಳಿಸಲು ಪರಿಶಿಷ್ಟ ಜಾತಿ-ಪಂಗಡ ಅಭಿವೃದ್ಧಿ ಅಧಿಕಾರಿಗೆ ಹೊಣೆ ನೀಡಲಾಗಿದೆ. ಆರೋಗ್ಯ ಇಲಾಖೆ ವಾಕ್ಸಿನೇಷನ್ ಸೌಲಭ್ಯ ಒದಗಿಸಲಿದೆ. ಲಾಕ್ ಡೌನ್ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಸಿ.ಎಫ್.ಎಲ್.ಟಿ.ಸಿ.ಗಳ ಕೋವಿಡ್ ರೋಗಿಗಳು, ಇತರ ರಾಜ್ಯಗಳ ಕಾರ್ಮಿಕರು, ವೃದ್ಧಾಶ್ರಮ ಇತ್ಯಾದಿಗಳಿಗೆ ಮಿಲ್ಮಾ ಮೂಲಕ ಹಾಲು ವಿತರಣೆ ನಡೆಸುವ ನಿಟ್ಟಿನಲ್ಲಿ ಹಾಲು ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೊಣೆ ನೀಡಲಾಗಿದೆ.
ಮಾಸ್ಟರ್, ಆರ್.ಆರ್.ಟಿ., ವಾರ್ಡ್ ಮಟ್ಟದ ಜಾಗೃತಿ ಸಮಿತಿಗಳ ಚಟುವಟಿಕೆ ಇತ್ಯಾದಿಗಳ ಅವಲೋಕನ ನಡೆಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳ ಸಭೆ ಗುರುವಾರ ನಡೆಯಲಿದೆ. ಜಿಲ್ಲಾಧಿಕಾರಿ ಆನ್ ಲೈನ್ ಮೂಲಕ ಈ ಸಭೆಯಲ್ಲಿ ಭಾಗವಹಿಸುವರು.
ಮನೆಯಲ್ಲಿ ಒಬ್ಬರಿಗೆ ಕೋವಿಡ್ ಪಾಸಿಟಿವ್ ಆದರೆ, ಉಳಿದ ಸದಸ್ಯರು ಕಡ್ಡಾಯವಾಗಿ 14 ದಿನಗಳ ಕ್ವಾರೆಂಟೈನ್ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಟೆಸ್ಟ್ ಪಾಸಿಟಿವಿಟಿ ರೇಟ್ ಹತ್ತಕ್ಕಿಂತ ಕಡಿಮೆ ಆಗುವವರೆಗೆ ಕಟ್ಟುನಿಟ್ಟು ಮುಂದುವರಿಸುವಂತೆ ಐ.ಸಿ.ಎಂ.ಆರ್. ಸಲ್ಲಿಸಿರುವ ಶಿಫಾರಸು ಸಲ್ಲಿಸಿದೆ. ಎಲ್ಲರೂ ಈ ನಿಟ್ಟಿನಲ್ಲಿ ಸಹಕರಿಸುವಂತೆ ಜಿಲ್ಲಾಧಿಕಾರಿ ವಿನಂತಿಸಿದರು.
ಪೋಲೀಸ್ ಕಟ್ಟುನಿಟ್ಟು ಬಿಗಿ
ಲಾಕ್ ಡೌನ್ ಆದೇಶಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೆÇಲೀಸ್ ಕಟ್ಟುನಿಟ್ಟು ಬಿಗಿಗೊಳಿಸಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪಿ.ಬಿ.ರಾಜೀವ್ ತಿಳಿಸಿದರು.
ಕ್ವಾರೆಂಟೈನ್ ತಪಾಸನೆ ನಡೆಸುವ ನಿಟ್ಟಿನಲ್ಲಿ ಬೈಕ್ ಗಸ್ತು ವಿಸ್ತರಣೆ ನಡೆಸಲಾಗಿದೆ. ನೂತನವಾಗಿ ತರಬೇತಿ ಪಡೆದಿರುವ ಕಾಸರಗೋಡು ಜಿಲ್ಲೆಯವರೇ ಆಗಿರುವ 48 ಮಂದಿ ಪೆÇಲೀಸ್ ಸಿಬ್ಬಂದಿ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಕೋವಿಡ್ ಪ್ರತಿರೋಧ ಚಟುವಟಿಕೆಗಳಲ್ಲಿ ನೇಮಕಗೊಂಡಿದ್ದಾರೆ ಎಂದವರು ನುಡಿದರು.
ಕಾಸರಗೋಡು ಜಿಲ್ಲೆಯಲ್ಲಿ ಮಾಸ್ಟರ್ ಯೋಜನೆ ಅತ್ಯುತ್ತಮ ರೀತಿ ಜಾರಿಗೊಳ್ಳುತ್ತಿದೆ ಎಂದು ಸಭೆ ಶ್ಲಾಘನೆ ನಡೆಸಿದೆ. ಜಿಲ್ಲೆಯಲ್ಲಿ ಸಮಾಜನೀತಿ ಇಲಾಖೆ ವಯೋವೃದ್ಧರಿಗಿರುವ ಕಿಟ್ ವಿತರಣೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಉಪಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ, ಹೆಚ್ಚುವರಿ ದಂಡನಾಧಿಕಾರಿ ಅತುಲ್ ಸ್ವಾಮಿನಾಥ್, ಜಿಲ್ಲಾ ವೈದ್ಯಾಧಿಕಾರಿ ಕೆ.ಆರ್.ರಾಜನ್, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಎ.ವಿ.ರಾಮದಾಸ್ , ಸಮಿತಿ ಸದಸ್ಯರು ಉಪಸ್ಥಿತರಿದ್ದರು.