ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 'ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ' (ಪಿಎಂ-ಕಿಸಾನ್) ಯೋಜನೆಯಡಿ 8ನೇ ಕಂತಿನ ಹಣವನ್ನು ಶುಕ್ರವಾರ (ಮೇ 14) ಬಿಡುಗಡೆ ಮಾಡುವರು.
ವಿಡಿಯೊ ಕಾನ್ಫರೆನ್ಸ್ ವಿಧಾನದ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ 9.5 ಕೋಟಿಗೂ ಅಧಿಕ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 19,000 ಕೋಟಿಗೂ ಅಧಿಕ ಮೊತ್ತವನ್ನು ವರ್ಗಾಯಿಸಲಾಗುವುದು ಎಂದು ಪ್ರಧಾನ ಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಇದೇ ಕಾರ್ಯಕ್ರಮದಲ್ಲಿ ಮೋದಿಯವರು ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.