ನವದೆಹಲಿ: ಅಕ್ಷಯ ತೃತೀಯದ ಶುಭ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂಕೆಎಸ್ ಎನ್ ವೈ) ಯಡಿ 8ನೇ ಕಂತನ್ನು ಬಿಡುಗಡೆ ಮಾಡಿದರು.
20 ಸಾವಿರ ಕೋಟಿ ರೂ. ಗೂ ಅಧಿಕ ಹಣವನ್ನು 8ನೇ ಕಂತಿನಲ್ಲಿ ಬಿಡುಗಡೆ ಮಾಡಿದ್ದು 9.5 ಕೋಟಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಈ ಮೂಲಕ 2021-22ನೇ ಆರ್ಥಿಕ ವರ್ಷದ ಮೊದಲ ಕಂತನ್ನು ಇಂದು ಬಿಡುಗಡೆ ಮಾಡಿದಂತಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ದೆಹಲಿಯ ತಮ್ಮ ಕಚೇರಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಹಣ ಬಿಡುಗಡೆ ಮಾಡಿದ್ದಾರೆ.
2019ರ ಡಿಸೆಂಬರ್ ನಲ್ಲಿ ಜಾರಿಗೆ ಬಂದ ಈ ಯೋಜನೆಯಿಂದ ಸರ್ಕಾರಕ್ಕೆ ವರ್ಷಕ್ಕೆ 75 ಸಾವಿರ ಕೋಟಿ ರೂಪಾಯಿ ವೆಚ್ಚ ತಗುಲುತ್ತದೆ.