ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮೇ 12,13ರಂದು ಮಾಸ್ಕ್ ಧರಿಸದೇ ಅಡ್ಡಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ 982 ಮಂದಿ ವಿರುದ್ಧ ಪೆÇಲೀಸರು ಕೇಸು ದಾಖಲಿಸಿದ್ದಾರೆ. ಮೇ 12ರಮದು 467 ಮಂದಿ ವಿರುದ್ಧ, ಮೇ 13ರಂದು 515 ಮಂದಿ ವಿರುದ್ಧ ಕೇಸು ದಾಖಲಾಗಿದೆ.
ಕೋವಿಡ್ 19 ಆದೇಶ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿ ಮೇ 12ರಂದು 10 ಮಂದಿ ವಿರುದ್ಧ, ಮೇ 13ರಂದು 13 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 116665 ಮಂದಿ ವಿರುದ್ಧ ಕೇಸು ದಾಖಲಾಗಿದೆ.