ನವದೆಹಲಿ; ಕರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ ನೀಡಿದೆ.
2020-21 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಈ ಮೊದಲು ಜುಲೈ 31 ಕಡೆಯ ದಿನವಾಗಿತ್ತು. ಇದೀಗ ದೇಶದಲ್ಲಿ ಕೊರೊನಾ ಎರಡನೇ ಅಲೆ ಇರುವುದರಿಂದ ಈ ದಿನವನ್ನು ಸೆಪ್ಟೆಂಬರ್ 30 ರವರೆಗೆ ಮುಂದೂಡಿ ಕೇಂದ್ರ ನೇರ ತೆರಿಗೆ ಮಂಡಳಿ ಆದೇಶ ಮಾಡಿದೆ.
ಕರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ತೆರಿಗೆ ರಿಟರ್ನ್ ಸಲ್ಲಿಸಲು ಕಡೆಯ ದಿನಾಂಕವನ್ನು ಮುಂದುವರೆಸಬೇಕು ಎಂದು ಸಾಕಷ್ಟು ಒತ್ತಾಯ ಕೇಳಿ ಬಂದಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಬಿಡಿಟಿ ತಿಳಿಸಿದೆ.
ತೆರಿಗೆ ಪಾವತಿದಾರರು ರಿಟರ್ನ್ ಸಲ್ಲಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ.