HEALTH TIPS

ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ಆಮ್ಲಜನಕ ದೊರೆಯುವುದಿಲ್ಲ: 'ಸುಪ್ರೀಂ'

            ನವದೆಹಲಿ: 'ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ದೆಹಲಿಗೆ ಆಮ್ಲಜನಕ ದೊರೆಯುವುದಿಲ್ಲ. ಜನರ ಜೀವ ಉಳಿಸುವ ಕ್ರಮಗಳನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ' ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

       ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

       ಮೇ 3ರವರೆಗೆ ರಾಷ್ಟ ರಾಜಧಾನಿಗೆ ಎಷ್ಟು ಆಮ್ಲಜನಕವನ್ನು ಪೂರೈಸಲಾಗಿದೆ ಎನ್ನುವ ವಿವರ ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರಕ್ಕೆ ಸೂಚಿಸಿದೆ.

         ದೆಹಲಿಗೆ ಮೇ 3ರಿಂದ ಪ್ರತಿ ದಿನ 700 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಪೂರೈಸಬೇಕು ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಪೀಠವು ಇದೇ ಸಂದರ್ಭದಲ್ಲಿ ಆದೇಶಿಸಿತು.

'ಜನರಿಂದ ಆಯ್ಕೆಯಾಗಿರುವ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಕೋವಿಡ್‌-19 ನಿಯಂತ್ರಿಸಲು ಅತ್ಯುತ್ತಮ ಕಾರ್ಯ ಕೈಗೊಂಡಿದೆ' ಎಂದು ಸಾಲಿಸಿಟರಲ್‌ ಜನರಲ್‌ ತುಷಾರ್‌ ಮೆಹ್ತಾ ಪ್ರತಿಪಾದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries