ಭುವನೇಶ್ವರ: ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಅನುಮೋದಿಸಿರುವ ನವೀನ್ ಪಟ್ನಾಯಕ್, ಕಾರ್ಯನಿರತ ಪತ್ರಕರ್ತರು ಅಪಾರ ಸುದ್ದಿಗಳನ್ನು ನೀಡುವ ಮೂಲಕ ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.ಈ ಮೂಲಕ ಬಿಕ್ಕಟ್ಟಿನ ಸಂದರ್ಭದಲ್ಲಿ ಕೋವಿಡ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಕೋವಿಡ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯವರ ಈ ನಿರ್ಧಾರದಿಂದ ಗೋಪಬಂಧು ಸಾಂಬದಿಕ ಸ್ವಾಸ್ಥ್ಯ ಭೀಮಾ ಯೋಜನೆ ವ್ಯಾಪ್ತಿಗೆ ಬರುವ 6,944 ಕಾರ್ಯನಿರತ ಪತ್ರಕರ್ತರಿಗೆ ಪ್ರಯೋಜನವಾಗಲಿದ್ದು, ತಲಾ 2 ಲಕ್ಷ ರೂ.ಗಳ ಆರೋಗ್ಯ ವಿಮೆ ಸಿಗಲಿದೆ.