ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.
ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಲೋಕಸಭೆಗೆ ಉಪಚುನಾವಣೆ ನಡೆದಿತ್ತು. ಬಿಜೆಪಿ ತನ್ನ ಅಭ್ಯರ್ಥಿಯಾಗಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರನ್ನು ಕಣಕ್ಕಿಳಿಸಿತ್ತು. ಇನ್ನು ಕಾಂಗ್ರೆಸ್ ಸಹ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಿತ್ತು.
ಇಬ್ಬರ ನಡುವೆ ನಡೆದ ತೀವ್ರ ಹಣಾಹಣಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಕೊನೆಯ 7 ಸುತ್ತುಗಳ ಮತ ಎಣಿಕೆಯೊರೆಗೂ ಮುನ್ನಡೆ ಸಾಧಿಸಿದ್ದರು. ಆದರೆ ನಂತರ ಮಂಗಳಾ ಅಂಗಡಿ ಅವರು ಮುನ್ನಡೆ ಸಾಧಿಸುವ ಮೂಲಕ ಗೆಲುವ ದಾಖಲಿಸಿದ್ದಾರೆ.
ಸತೀಶ್ ಜಾರಕಿಹೊಳಿಯವರು ಬರೋಬ್ಬರಿ 4,35,202 ಮತಗಳನ್ನು ಪಡೆದಿದ್ದರೆ ಸತೀಶ್ ಜಾರಕಿಹೊಳಿ ಅವರು 4,32,299 ಮತಗಳನ್ನು ಪಡೆದಿದ್ದಾರೆ.