HEALTH TIPS

ಲಸಿಕೆಗಳಿಗೆ ಬೌದ್ಧಿಕ ಆಸ್ತಿ ಹಕ್ಕಿನಿಂದ ವಿನಾಯಿತಿ ನೀಡಲು ಡಬ್ಲ್ಯೂಟಿಒ ಚಿಂತನೆ

Top Post Ad

Click to join Samarasasudhi Official Whatsapp Group

Qries

            ಜಿನಿವಾ: ಲಸಿಕೆಗಳ ಮೇಲಿನ ಬೌದ್ಧಿಕ ಆಸ್ತಿ ಹಕ್ಕುಗಳ ಕಾಯ್ದೆಯಿಂದ ವಿನಾಯಿತಿ ನೀಡುವ ಬಗ್ಗೆ ವಿಶ್ವ ವಾಣಿಜ್ಯ ಸಂಸ್ಥೆ (ಡಬ್ಲ್ಯೂಟಿಒ) ಚಿಂತನೆ ನಡೆಸಿದೆ.


        ಈ ಬಗ್ಗೆ ಡಬ್ಲ್ಯೂಟಿಒ ಸದಸ್ಯ ರಾಷ್ಟ್ರಗಳ ರಾಯಭಾರಿಗಳು ಚರ್ಚೆ ನಡೆಸಲಿದ್ದಾರೆ. ಲಸಿಕೆಗಳ ಮೇಲಿನ ಬೌದ್ಧಿಕ ಹಕ್ಕು ಸಡಿಲಗೊಳಿಸುವಂತೆ ಶ್ರೀಮಂತ ರಾಷ್ಟ್ರಗಳ ಮೇಲೆ ಅಭಿವೃದ್ಧಿಶೀಲ ರಾಷ್ಟ್ರಗಳು ಒತ್ತಾಯಿಸುತ್ತಿವೆ. ಇದರಿಂದ, ಕೋವಿಡ್‌-19 ನಿಯಂತ್ರಿಸಲು ಅನುಕೂಲವಾಗುತ್ತದೆ ಎಂದು ಈ ರಾಷ್ಟ್ರಗಳು ಪ್ರತಿಪಾದಿಸಿವೆ.

         ಅಕ್ಟೋಬರ್‌ ತಿಂಗಳಲ್ಲಿ ಮೊದಲ ಬಾರಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಈ ವಿಷಯವನ್ನು ಪ್ರಸ್ತಾಪಿಸಿದ್ದವು. ಈ ಬೇಡಿಕೆಗೆ ಹಲವು ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿದ್ದವು.

ಆದರೆ, ಹಲವು ದೇಶಗಳಲ್ಲಿನ ಪ್ರಭಾವಿ ಫಾರ್ಮಾಸ್ಯೂಟಿಕಲ್‌ ಉದ್ಯಮಗಳು ಈ ಪ್ರಸ್ತಾವಕ್ಕೆ ವಿರೋಧ ವ್ಯಕ್ತಪಡಿಸಿವೆ.

       ಭಾರತದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿದ ಬಳಿಕ ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆಯಿಂದ ಲಸಿಕೆಗಳಿಗೆ ವಿನಾಯಿತಿ ನೀಡುವಂತೆ ಒತ್ತಾಯ ಹೆಚ್ಚುತ್ತಿದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries