ತಿರುವನಂತಪುರ: ಕಾಂಗ್ರೆಸ್‌ನ ಹಿರಿಯ ಮುಖಂಡ ವಿ.ಡಿ.ಸತೀಶನ್ ಅವರನ್ನು ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ.
'ಸತೀಶನ್ ಅವರನ್ನು ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಐಸಿಸಿ ಶನಿವಾರ ನೇಮಕ ಮಾಡಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಇಲ್ಲಿ ತಿಳಿಸಿದರು.
ಸತೀಶನ್ ಅವರು ಪರವೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.