ಲಖನೌ: ಉತ್ತರ ಪ್ರದೇಶದಲ್ಲಿ ಬುಧವಾರದಂದು ನಡೆದ ದಾರುಣ ಘಟನೆಯಲ್ಲಿ ಆಮ್ಲಜನಕ ಘಟಕದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಚಿನ್‌ಹಟ್ ಪ್ರದೇಶದ ಆಮ್ಲಜನಕ ಘಟಕದಲ್ಲಿ ಸಿಲಿಂಡರ್‌ಗೆ ಮರುಪೂರಣ ಪ್ರಕ್ರಿಯೆ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಮ್ಲಜನಕ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಗುರುತು ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಚಿನ್‌ಹಟ್ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‍ಒ) ಧನಂಜಯ್ ಪಾಂಡೆ ತಿಳಿಸಿದ್ದಾರೆ.
ಈ ದುರ್ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತಾಪ ಸೂಚಿಸಿದ್ದಾರೆ.