ತಿರುವನಂತಪುರ: ಓಣಂ ರಜೆಗಿಂತ ಅಲ್ಪ ಮೊದಲು ಪ್ಲಸ್ ಒನ್ ಪರೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಆ ಸಮಯದಲ್ಲಿ ಪರೀಕ್ಷೆಯನ್ನು ನಡೆಸಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿರುವರು.
ಪರೀಕ್ಷೆಯನ್ನು ಮೊದಲೇ ನಡೆಸಬಾರದು ಎಂದು ಸೇರಿದಂತೆ ವಿವಿಧ ಆಯಾಮಗಳಿಂದ ಸಲಹೆಗಳನ್ನು ಎತ್ತಲಾಗಿತ್ತು. ಆ ಬಳಿಕ ವಿಶ್ಲೇಷಣೆ ನಡೆಸಿ ಮುಖ್ಯಮಂತ್ರಿ ನಿರ್ಧಾರವನ್ನು ಪ್ರಕಟಿಸಿದರು. ಎಸ್‍ಎಸ್‍ಎಲ್‍ಸಿ, ಹೈಯರ್ ಸೆಕೆಂಡರಿ ಮತ್ತು ಪೊಕೇಶನಲ್ ಹೈಯರ್ ಸೆಕೆಂಡರಿ ಮೌಲ್ಯಮಾಪನಕ್ಕೆ ನಿಯೋಜಿಸಲಾದ ಶಿಕ್ಷಕರನ್ನು ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಲಾಗುವುದು.
ತಾಂತ್ರಿಕ ಶಿಕ್ಷಣ ಮಂಡಳಿಯ ಅಧೀನದಲ್ಲಿರುವ ಪಾಲಿಟೆಕ್ನಿಕ್ ಕಾಲೇಜುಗಳ ಐದನೇ ಸೆಮಿಸ್ಟರ್‍ನಲ್ಲಿ ಬಾಕಿ ಇರುವ ಪರೀಕ್ಷೆಗಳ ಮೌಲ್ಯಮಾಪನವನ್ನು ಶೀಘ್ರದಲ್ಲೇ ನಡೆಸಲಾಗುವುದು. ಬಾಕಿ ಇರುವ ಪರೀಕ್ಷೆಗಳಿಗೆ ಆಂತರಿಕ ಮೌಲ್ಯಮಾಪನ ಅಂಕಗಳ ಆಧಾರದ ಮೇಲೆ ಜೂನ್‍ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಐದನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟಣೆಯ ನಂತರ, ಆರನೇ ಸೆಮಿಸ್ಟರ್ ಪರೀಕ್ಷೆಗಳು ಜುಲೈನಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿರುವರು.