ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜರಗನಹಳ್ಳಿ ಶಿವಶಂಕರ್ ಇಂದು (ಬುಧವಾರ) ಬೆಳಗ್ಗೆ ನಿಧನರಾಗಿದ್ದಾರೆ.
ಜರಗನಹಳ್ಳಿ ಶಿವಶಂಕರ್ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲ ದಿನದ ಹಿಂದೆ ಇವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಜರಗನಹಳ್ಳಿ ಶಿವಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರ ಕಾರ್ಯದರ್ಶಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಕನ್ನಡದ ಪ್ರಮುಖ ನಿಯತಕಾಲಿಕೆಗಳಲ್ಲಿ ಇವರ ಹನಿಗವಿತೆಗಳು, ಲೇಖನಗಳು 40ಕ್ಕೂ ಹೆಚ್ಚು ವರ್ಷಗಳ ಕಾಲ ಪ್ರಕಟಗೊಂಡಿವೆ. ಶುಭಾಂಗಿ, ಹನಿಗವಾನ್-ಸ್ಟ್ರಿಂಗ್, ಮರಗಳು, ಮಳೆ, ಆಲಿಕಲ್ಲು, ದೇವರ ನೆರಳು ಇವರ ಪ್ರಮುಖ ಸಂಕಲನಗಳಾಗಿವೆ.
ಜರಗನಹಳ್ಳಿ ಶಿವಶಂಕರ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿನಕರ ದೇಸಾಯಿ ಪ್ರಶಸ್ತಿ, ಸುವರ್ಣ ಕರ್ನಾಟಕ ಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.