ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಬದಿಯಡ್ಕ ಘಟಕದ ವತಿಯಿಂದ ಕೋವಿಡ್ 19 ಬಾಧಿತರಿರುವ ಮನೆಗಳಲ್ಲಿ ಕ್ವಾರಂಟೈನ್‍ನಲ್ಲಿರುವವರಿಗಾಗಿ ಪಲ್ಸ್ ಓಕ್ಸಿ ಮೀಟರ್ ನ್ನು ನೀಡಲಾಯಿತು. ಬದಿಯಡ್ಕ ಘಟಕದ ಅಧ್ಯಕ್ಷ ಕುಂಜಾರು ಮುಹಮ್ಮದ್ ಹಾಜಿ ಹಾಗೂ ಉಪಾಧ್ಯಕ್ಷ ರಾಜು ಸ್ಟೀಫನ್ ಅವರು ಬದಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಧಾನ ವೈದ್ಯಾಧಿಕಾರಿ ಸತ್ಯಶಂಕರ ಭಟ್ ಅವರಿಗೆ ಕಿಟ್ ಹಸ್ತಾಂತರಿಸಿದರು.