ವಿಶಾಖಪಟ್ಟಣ: ನಗರದ ಮಲ್ಕಾಪುರಂ ಪ್ರದೇಶದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಯ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟಕದ ಸುತ್ತ ದಟ್ಟ ಹೊಗೆ ಆವರಿಸಿದೆ.
ಈವರೆಗೆ ಸಾವು ನೋವಿನ ಬಗ್ಗೆ ಯಾವುದೇ ವರದಿ ಬಂದಿಲ್ಲ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ನಿರತವಾಗಿವೆ.
ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..